Advertise

12 August 2024

13.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


13.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ ಸುತ್ತಮುತ್ತ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಶಿವಮೊಗ್ಗದ ಆಗುಂಬೆ ಸುತ್ತಮುತ್ತ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಪಾವಗಢ ಸಹಿತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ ಹಾಗೂ ಆಂದ್ರಾ ಗಡಿಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನಂತೆ ಕರಾವಳಿ ಭಾಗಗಳಲ್ಲಿ ಆಗಸ್ಟ್ 16ರ ತನಕ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, 17ರಿಂದ ಅಲ್ಲಲ್ಲಿ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ. 
ಕೊಡಗು, ಹಾಸನ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚೆನೆ ಇದೆ. 
ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. 
ಶ್ರೀಲಂಕಾ ಪಶ್ಚಿಮ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಪರಿಣಾಮ ಕಾದು ನೋಡಬೇಕಾಗಿದೆ. 

No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...