Advertise

16 August 2024

17.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಸುತ್ತಮುತ್ತ, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಬೆಂಗಳೂರು ದಕ್ಷಿಣ, ಬಾಗಲಕೋಟೆ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ (ಚಿಕ್ಕೋಡಿ ಸಹಿತ), ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಬಳ್ಳಾರಿ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಈಗಿನಂತೆ ಆಗಸ್ಟ್ 17ರಿಂದ ರಾಜ್ಯದಾದ್ಯಂತ ಮಳೆಯ ತೀವ್ರತೆ ಕಡಿಮೆ ಆಗುವ ಮುನ್ಸೂಚೆನೆ ಇದೆ. 
ಬಂಗಾಳಕೂಲ್ಲಿಯ ಬಂಗ್ಲಾದೇಶ ಕರಾವಳಿಯಲ್ಲಿ ಹಾಗೂ ತಮಿಳುನಾಡಿನ ತುತುಕುಡಿ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಆಗಸ್ಟ್ 17,18ರಂದು ಸ್ಪಷ್ಟತೆ ಸಿಗಬಹುದು.
ಪಶ್ಚಿಮದ ಗಾಳಿ ಹಾಗೂ ಪೂರ್ವದ ಗಾಳಿಯು ಕರ್ನಾಟಕದ - ವಿಭಜಿತ ಆಂದ್ರಾ ಗಡಿ ಭಾಗಗಳಲ್ಲಿ ಸಂಧಿಸುತ್ತಿರುವುದರಿಂದ ಆ ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. 

No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...