Advertise

17 August 2024

18.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ದಿನವಿಡೀ ಮೋಡದ ವಾತಾವರಣ ಇರಲಿದ್ದು ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ವೇಳೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು ಭಾಗಗಳಲ್ಲಿ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿಯ ವೇಳೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಇವತ್ತು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದ ಗಾಳಿಯು ದಕ್ಷಿಣಾಭಿಮುಖವಾಗಿ ಚಲಿಸಿ ಶ್ರೀಲಂಕಾ ಮೂಲಕ ಬಂಗಾಳಕೊಲ್ಲಿಗೆ ಸಾಗಿ ಭೂಮಿಗೆ ಪ್ರವೇಶಿಸುವುದರಿಂದ ರಾಜ್ಯದಲ್ಲಿ ಅಧಿಕ ವ್ಯಾಪ್ತಿಯ ತಿರುವಿಕೆ ಉಂಟಾಗಿದೆ. ಇದರ ಪರಿಣಾಮದಿಂದ ಗಾಳಿಯ ಚಲನೆಯ ದಿಕ್ಕು ಆಗಾಗ ಬದಲಾಗುತ್ತಿರುವುದರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕೆಲವು ಭಾಗಗಳಲ್ಲಿ ಹೆಚ್ಚು ಹಾಗೂ ಕೆಲವು ಭಾಗಗಳಲ್ಲಿ ಕಡಿಮೆಯಾಗುವ ಸಾಧ್ಯತೆಗಳಿವೆ. 
ಆಗಸ್ಟ್ 20ರ ನಂತರ ಕೇರಳ ಕರಾವಳಿ ತೀರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಉಂಟಾಗುವ ಲಕ್ಷಣಗಳಿದ್ದು, ಇದರ ಪ್ರಭಾವದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. 

No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...