Advertise

18 August 2024

19.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


19.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇದ್ದು, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಇವತ್ತು ರಾಜ್ಯದಾದ್ಯಂತ ಮೋಡದ ವಾತಾವರಣ ಇರಲಿದ್ದು, ಚಿತ್ರದುರ್ಗದಿಂದ ಬೆಳಗಾವಿ ತನಕ ಪಶ್ಚಿಮ ಹಾಗೂ ಪೂರ್ವದ ಗಾಳಿಯು ಸಂಧಿಸುವ ಪ್ರದೇಶವಾದ್ಧರಿಂದ ಉತ್ತರ ಒಳನಾಡು ಭಾಗಗಳ ಹೆಚ್ಚಿನ ಪ್ರದೇಶಗಳಲ್ಲಿ  ಮಳೆಯ ಮುನ್ಸೂಚನೆ ಇದೆ. ಕೊಪ್ಪಳ ಮೋಡ ಮಾತ್ರ ಇರಬಹುದು.
ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ, ಆಗಸ್ಟ್ 21ರಂದು ಕೇರಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ, ಕರಾವಳಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿವೆ. 

No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...