Advertise

20 August 2024

21.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಉತ್ತರ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಾಪುರ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಮಂಡ್ಯ, ತುಮಕೂರು( ಪಾವಗಢ ಉತ್ತಮ ಇರಬಹುದು), ಹಾವೇರಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಹಾರಾಷ್ಟ್ರ - ಕರ್ನಾಟಕ ಗಡಿ ಭಾಗಗಳ ಸುತ್ತಮುತ್ತ ಮಳೆ ಕಡಿಮೆ ಇರಬಹುದು.

ಈಗಿನಂತೆ ಆಗಸ್ಟ್ 23ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ತಿರುಗುವಿಕೆಯು ಒಮ್ಮೆಗೆ ಶಿಥಿಲಗೊಂಡರೂ ಆಗಸ್ಟ್ 25ರ ಸುಮಾರಿಗೆ ಮಹಾರಾಷ್ಟ್ರ ಕರಾವಳಿಯಲ್ಲಿ ಮತ್ತೆ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಇದರಿಂದ ಮುಂಗಾರು ಚುರುಕಾಗುವ ಲಕ್ಷಣಗಳಿವೆ. ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸಿ ಕರಾವಳಿ ಭಾಗಗಳಲ್ಲಿ ಆಗಸ್ಟ್ 30ರ ತನಕವೂ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. (ಆಗಸ್ಟ್ 24ರಿಂದ ಕರಾವಳಿಯಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಕಡಿಮೆಯಾಗಬಹುದು). 

No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...