Advertise

25 August 2024

26.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


26.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ದಾವಣಗೆರೆ ಒಂದೆರಡು ಕಡೆ, ಯಾದಗಿರಿ, ಕಲಬುರ್ಗಿ, ಬೀದರ್ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಈಗಿನಂತೆ ಉತ್ತರ ಭಾರತದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದಿಂದ ಪಶ್ಚಿಮಕ್ಕೆ ಚಲಿಸುತ್ತಿದ್ದು, ಆಗಸ್ಟ್ 28ರಂದು ಉತ್ತರ ಗುಜರಾತ್ ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ.
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆಗಸ್ಟ್ ಕೊನೆಯ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ರಾಜ್ಯದ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಹೊರತುಪಡಿಸಿ ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...