Advertise

26 August 2024

27.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮುಂಗಾರು ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ 

ಈಗಿನಂತೆ ಆಗಸ್ಟ್ ಕೊನೆಯ ತನಕವೂ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಮಲೆನಾಡು ಭಾಗಗಳಲ್ಲಿ ಕರಾವಳಿ ಜೆಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆ ಹಾಗೂ ಉಳಿದ ಭಾಗಗಳಲ್ಲಿ ತುಂತುರು ಮಳೆ ಮುಂದುವರಿಯಲಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಗುಜರಾತ್ ವಾಯುಭಾರ ಕುಸಿತವು ಪಶ್ಚಿಮಕ್ಕೆ ಚಲಿಸುತ್ತಿದ್ದು ಆಗಸ್ಟ್ 29 ಅಥವಾ 30ರಂದು ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಗುಜರಾತ್ ನಾದ್ಯಂತ ಭಾರಿ ಮಳೆ ಮುಂದುವರಿಯಲಿದೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...