Advertise

29 August 2024

30.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಅಲ್ಲಲ್ಲಿ ತುಂತುರು ಹಾಗೂ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಮೈಸೂರು ಉತ್ತರ, ಚಾಮರಾಜನಗರ (ಕೊಳ್ಳೇಗಾಲ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ - ಹಾವೇರಿ ಗಡಿಭಾಗಗಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ  ಮುನ್ಸೂಚನೆ ಇದೆ. 
ಉಳಿದ ದಾವಣಗೆರೆ, ಹಾವೇರಿ ಹಾಗೂ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಈಗಿನಂತೆ ಗುಜರಾತ್ ವಾಯುಭಾರ ಕುಸಿತವು ಆಗಸ್ಟ್ 30ರಂದು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿ ಪಾಕಿಸ್ತಾನದ ಕರಾವಳಿ ಮೂಲಕ ಸಾಗಿ ಆಗಸ್ಟ್ 31ರಂದು ಮಸ್ತ ಕಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ತಿರುಗುವಿಕೆ ಉಂಟಾಗಿದ್ದು, ವಾಯುಭಾರ ಕುಸಿತವಾಗುವ ಲಕ್ಷಣಗಳಿಲ್ಲದಿದ್ದರೂ ಪರಿಸ್ಥಿತಿ ಕಾದು ನೋಡಬೇಕಾಗಿದೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...