Advertise

30 September 2024

01.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


01.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಸುಳ್ಯ ತಾಲೂಕು ಕೆಲವು ಭಾಗಗಳಲ್ಲಿ ಮುಂಜಾನೆಯೇ ಮಳೆಯಾದ್ದರಿಂದ ಮತ್ತೆ ಜೋರು ಮಳೆಯ ನಿರೀಕ್ಷೆ ಕಡಿಮೆಯಾಗಿದೆ. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಇನ್ನೆರಡು ದಿನಗಳಲ್ಲಿ ಕರಾವಳಿ ಭಾಗಗಳಲ್ಲಿ ಮಳೆಯ ಪರಿಣಾಮ ಕಡಿಮೆಯಾಗುವ ಲಕ್ಷಣಗಳಿದ್ದು ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ವಿಜಯಪುರದ ವಿಜಯಪುರ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. 
ಹಾವೇರಿ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ದಕ್ಷಿಣ ಒಳನಾಡಿವಲ್ಲಿ ಇವತ್ತು ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ನಾಳೆಯಿಂದ ಅಂದರೆ ಒಕ್ಟೊಬರ್ 1ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿರುವಿಕೆ ಪರಿಣಾಮದಿಂದ ಮುಂಗಾರು ಮಾರುತಗಳು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ಈಗಿನ ಮಳೆಯ ವಾತಾವರಣ ಉಂಟಾಗಿದೆ. ಇದರಿಂದ ಹಿಂಗಾರು ಮಾರುತಗಳು ತಡವಾಗುವ ಸಾಧ್ಯತೆಗಳಿವೆ. 




No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...