Advertise

07 September 2024

08.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.09.2024ಲ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನದ ತುಮಕೂರು ಕಡೆಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಈಗಿನಂತೆ ಇನ್ನೆರಡು ದಿನಗಳಲ್ಲಿ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಈಗಿನ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆಯೇ, ಅಂದರೆ ಸೆಪ್ಟೆಂಬರ್ 13 ಅಥವಾ 14ರ ನಂತರ ತನಕ ಕರಾವಳಿ ಭಾಗಗಳಲ್ಲಿಯೂ ಮಳೆ ಕಡಿಮೆಯಾಗುವ  ಲಕ್ಷಣಗಳಿವೆ.


No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...