Advertise

08 September 2024

09.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

 ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. 

ಕೊಡಗು ಕೇರಳ ಹಾಗೂ ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ 

ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸೆಪ್ಟೆಂಬರ್ 9ರ ಸಂಜೆ ಅಥವಾ ರಾತ್ರಿ ಉತ್ತರ ಒಡಿಶಾ ಕರಾವಳಿ ಮೂಲಕ ಭೂಭಾಗಕ್ಕೆ ಪ್ರವೇಶಿಸುವ ಸಾಧ್ಯತೆಗಳಿವೆ. 
ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ, ಅಂದರೆ ಇನ್ನೆರಡು ದಿನಗಳಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳು ಸೇರಿದಂತೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...