Advertise

13 September 2024

14.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಒಂದೊಂದು ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ತೀರಾ ಕಡಿಮೆ. 

ಮಲೆನಾಡು : ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಒಳನಾಡು : ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...