Advertise

15 September 2024

16.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾತ್ರಿ ಹಾಗೂ ಮುಂಜಾನೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ವಾತಾವರಣವು ಇನ್ನು 2 ಅಥವಾ 3 ದಿನಗಳವರೆಗೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಬಿಸಿಲಿನ ವಾತಾವರಣ ಇರಬಹುದು. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ಈ ವಾತಾವರಣವು ಇನ್ನು 2 ಅಥವಾ 3 ದಿನಗಳ ಕಾಲ ಇರಲಿದ್ದು, ನಂತರ ಬಿಸಿಲಿನ ಅವಧಿ ಹೆಚ್ಚಿರಬಹುದು. 

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 
ಈಗಿನಂತೆ ಸೆಪ್ಟೆಂಬರ್ 21ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ದುರ್ಬಲಗೊಂಡು ಪಶ್ಚಿಮಾಭಿಮುಖವಾಗಿ ಚಲಿಸಿ ಸೆಪ್ಟೆಂಬರ್ 18ರ ಸಮಯಕ್ಕೆ ಉತ್ತರಾಖಂಡ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ. 

No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...