Advertise

16 September 2024

17.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಈಗ ಬಿಹಾರದಲ್ಲಿರುವ ವಾಯುಭಾರ ಕುಸಿತವು ಪಶ್ಚಿಮಕ್ಕೆ ಚಲಿಸಿ, ಉತ್ತರ ಪ್ರದೇಶ, ಉತ್ತರಾಖಂಡನಲ್ಲಿ ಶಿಥಿಲಗೊಳ್ಳುವ ತನಕ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಹಾಸನ ಬಿಸಿಲು ಮತ್ತು ಆಗಾಗ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಈಗಿನಂತೆ ಉತ್ತರ ಭಾರತದ ವಾಯುಭಾರ ಕುಸಿತವು ಶಿಥಿಲಗೊಳ್ಳುವ ತನಕ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಒಳನಾಡು : ತುಮಕೂರು, ಬೆಂಗಳೂರು, 
ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ 
ಈಗಿನಂತೆ ಉತ್ತರ ಭಾರತದ ವಾಯುಭಾರ ಕುಸಿತವು ಶಿಥಿಲಗೊಳ್ಳುವ ತನಕ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
 

No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...