Advertise

17 September 2024

18.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

 ಕರಾವಳಿ : ಈಗ ಉತ್ತರಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಮೋಡಗಳು ವಾಯವ್ಯದಿಂದ ಆಗ್ನೇಯಕ್ಕೆ ಚಲಿಸುತ್ತಿವೆ. ಇನ್ನೂ 2 ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮತ್ತು ಒಂದೆರಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 20ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ಈ ವಾತಾವರಣವು ಸೆಪ್ಟೆಂಬರ್ 20ರ ತನಕವೂ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಮೋಡ ಹಾಗೂ ಉತ್ತರ ಒಳನಾಡಿನ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಸೆಪ್ಟೆಂಬರ್ 21ರಿಂದ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ. 


No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...