Advertise

19 September 2024

20.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಸುಬ್ರಮಣ್ಯ, ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.  
ಈಗಿನಂತೆ ಸೆ. 20ರಂದು ಸಹ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ಸೆಪ್ಟೆಂಬರ್ 23ರಿಂದ ಮತ್ತೆ ಮಳೆಯ ಮುನ್ಸೂಚೆನೆ ಇದೆ. 

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಈ ಮಳೆಯ ವಾತಾವರಣವು ಸೆಪ್ಟೆಂಬರ್ ಕೊನೆರೆಗೂ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಹಾವೇರಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಸೆಪ್ಟೆಂಬರ್ 20ರಂದು ಕರ್ನಾಟಕ - ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಮಳೆಯ ಸಾಧ್ಯತೆಗಳಿದ್ದು, 21ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 23ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ಈ ಮಳೆಯ ವಾತಾವರಣವು ಸೆಪ್ಟೆಂಬರ್ ಕೊನೆಯವರೆಗೂ ಮುಂದುವರಿಯುವ ಸಾಧ್ಯತೆಗಳಿವೆ. 


No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...