Advertise

23 September 2024

23.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


23.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಸೆಪ್ಟೆಂಬರ್ 25ರ ವರೆಗೂ ದಿನಕ್ಕೆ ಒಂದೆರಡು ಮಳೆ ಮುಂದುವರಿಯುವ ಮುನ್ಸೂಚೆನೆ ಇದ್ದು, ಆಮೇಲೆ ಬಿಡುವಿದ್ದರೂ, ಸೆಪ್ಟೆಂಬರ್ 28ರಿಂದ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಮಲೆನಾಡು ಭಾಗಗಳಲ್ಲಿ ಅಷ್ಟೇನು ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಸೆಪ್ಟೆಂಬರ್ 29ರಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ದಕ್ಷಿಣ ಒಳನಾಡಿನ ಮೈಸೂರು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಸೆಪ್ಟೆಂಬರ್ 25ರ ತನಕ ಮಳೆ ಮುಂದುವರಿಯುವ ಮುನ್ಸೂಚೆನೆ ಇದ್ದು, ನಂತರ ಬಿಡುವಿದ್ದರೂ ಸೆಪ್ಟೆಂಬರ್ 28ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮತ್ತೆರಡು ದಿನಗಳಲ್ಲಿ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯ ಸಾಧ್ಯತೆಗಳಿವೆ 


No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...