Advertise

23 September 2024

24.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಸೆಪ್ಟೆಂಬರ್ 24ರಂದು ಉತ್ತರ ಕನ್ನಡ ಭಾರಿ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 25ರ ನಂತರ ಕರಾವಳಿ ಭಾಗಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಮತ್ತು ಹಾಸನ ಜಿಲ್ಲೆಯಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಸೆಪ್ಟೆಂಬರ್ 28ರಿಂದ ಮಲೆನಾಡು ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ಗದಗ, ಕೊಪ್ಪಳ, ಯಾದಗಿರಿ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಒಳನಾಡು ಭಾಗಗಳಲ್ಲಿ (ಉತ್ತರ ಹಾಗೂ ದಕ್ಷಿಣ) ಸೆಪ್ಟೆಂಬರ್ 25ರಿಂದ ಮಳೆ ಕಡಿಮೆಯಾಗಲಿದ್ದು, 28ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮತ್ತೆರಡು ದಿನಗಳಲ್ಲಿ ಉತ್ತರ ಒಳನಾಡು ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. 

No comments:

Post a Comment

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾ...