Advertise

29 September 2024

29.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಸೆಪ್ಟೆಂಬರ್ 30ರವರೆಗೂ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಬಹುತೇಕ ಭಾಗಗಳಲ್ಲಿ, ಹಾಸನ, ಚಿಕ್ಕಮಗಳೂರು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ, ಸೆಪ್ಟೆಂಬರ್ 30ರ ವರೆಗೂ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿಯ ವೇಳೆ ಗುಡುಗು ಸಹಿತ ಉತ್ತಮ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಒಂದೆರಡು ದಿನಗಳ ಬಿಡುವಿದ್ದರೂ ಮತ್ತೆ ಗುಡುಗು ಮಳೆ ಮುಂದುವರಿಯಲಿದೆ. 

ಒಳನಾಡು :  ಹಾವೇರಿ, ಧಾರವಾಡ, ಬೆಳಗಾವಿ, ಗದಗ, ರಾಯಚೂರು, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಒಕ್ಟೊಬರ್ 1 ಅಥವಾ 2ರ ತನಕವೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ನಂತರ ಒಂದೆರಡು ದಿನಗಳ ಬಿಡುವಿದ್ದರೂ, ಮುಂದಿನ 10 ದಿನಗಳವರೆಗೂ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ಗಾಳಿಯು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳೂ ಸೇರಿಕೊಂಡು ರಾಜ್ಯದಲ್ಲಿ ಗುಡುಗು ಸಹಿತ ಮಳೆಗೆ ಕಾರಣವಿರಬಹುದು.


No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...