Advertise

23 October 2024

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ತೀರ ಭಾಗಗಳ ಸುತ್ತಮುತ್ತ ಅಲ್ಲಲ್ಲಿ ರಾತ್ರಿ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಾಲೂಕು ಪ್ರದೇಶಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ, ಪುತ್ತೂರು, ಬಂಟ್ವಾಳ ತನಕವೂ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಒಕ್ಟೊಬರ್ 24ರಂದು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 25ರಿಂದ ಮಳೆಯ ಸಾಧ್ಯತೆ ಕಾಣುತ್ತಿಲ್ಲ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು. 
ಈಗಿನಂತೆ ಒಕ್ಟೊಬರ್ 24ರಂದು ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಸಾಧ್ಯತೆಗಳಿವೆ. 

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಮಾತ್ರ ಇರಬಹುದು. 
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಮಳೆ ಸ್ವಲ್ಪ ಜಾಸ್ತಿ ಇರಬಹುದು), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಉತ್ತರ ಒಳನಾಡಿನಲ್ಲಿ ಒಕ್ಟೊಬರ್ 24 ರಿಂದ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಕ್ಟೊಬರ್ 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಲಕ್ಷಣಗಳಿವೆ. 

ಬಂಗಾಳಕೊಲ್ಲಿಯ ಡಾನಾ ಚಂಡಮಾರುತವು ಒಕ್ಟೊಬರ್ 24ರ ರಾತ್ರಿ ಪಶ್ಚಿಮ ಬಂಗಾಳ ಹಾಗೂ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಇದರೊಂದಿಗೆ ಹಿಂಗಾರು ಸಂಪೂರ್ಣ ದುರ್ಬಲಗೊಳ್ಳಲಿದೆ. 
ಈಗಿನಂತೆ ಒಕ್ಟೊಬರ್ 28ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಅಧಿಕ ತಾಪಮಾನದ ಕಾರಣದಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 


22 October 2024

23.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಳೆದ ಮೂರು ನಾಲ್ಕು ದಿನಗಳ ಕಾಲ ರಾಜ್ಯದ ಉತ್ತರ ಕರಾವಳಿ, ಶಿವಮೊಗ್ಗ ಭಾಗಗಳಲ್ಲಿ ರಾತ್ರಿ ಅನಿರೀಕ್ಷಿತ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ಅರಬ್ಬಿ ಸಮುದ್ರದ ಕರಾವಳಿ ತೀರದಲ್ಲಿ ಗಾಳಿಯ ತಿರುಗುವಿಕೆಯ ಪರಿಣಾಮದಿಂದ ಈ ಮಳೆ ಇದ್ದಿರಬಹುದು. ಇವತ್ತು ಈಗಿನಂತೆ ಅಂತಹ ಗಾಳಿಯ ಚಲನೆ ಕಾಣಿಸುತ್ತಿಲ್ಲವಾದ್ದರಿಂದ ಭಾರಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು. 

ಕರಾವಳಿ : ಕಾಸರಗೋಡು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಒಕ್ಟೊಬರ್ 25ರಿಂದ ಮಳೆ ಕಡಿಮೆಯಾಗಿ 26ರಿಂದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಬಹುದು. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 25ರಿಂದ ಮಳೆ ಕಡಿಮೆಯಾಗಲಿದ್ದು, ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಲಕ್ಷಣಗಳಿವೆ. 

ಒಳನಾಡು : ಹಿಂಗಾರು ಮಾರುತಗಳ ದಿಕ್ಕು ಬದಲಾಗಿದ್ದರಿಂದ ಒಳನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆಯೇ? ಮಾರುತಗಳು ಆಗ್ನೇಯದಿಂದ ವಾಯವ್ಯಕ್ಕೆ (ಸಾಂಪ್ರದಾಯಿಕವಾಗಿ ಈಶಾನ್ಯದಿಂದ ನೈರುತ್ಯಕ್ಕೆ) ಚಲಿಸುತ್ತಿವೆ.

ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬಾಗಲಕೋಟೆ, ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಚಿತ್ರದುರ್ಗ  ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. (ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ತಡ ರಾತ್ರಿ ಭಾರಿ ಮಳೆಯ ಸಾಧ್ಯತೆ ಇದೆ). 

ಈಗಿನಂತೆ ಡಾನಾ ಚಂಡಮಾರುತವು ಒಕ್ಟೊಬರ್ 24ರಂದು ಪಶ್ಚಿಮ ಬಂಗಾಳ ಹಾಗೂ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಉತ್ತರ ಒಳನಾಡಿನಲ್ಲಿ ಒಕ್ಟೊಬರ್ 24ರಿಂದ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಕ್ಟೊಬರ್ 25ರಿಂದ ಮಳೆ ಕಡಿಮೆಯಾಗಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ. 

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...