Advertise

05 October 2024

05.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

05.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

 ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಪಶ್ಚಿಮದ ಮೋಡದಿಂದ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉತ್ತರ ಕನ್ನಡ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಅಲ್ಲಲ್ಲಿ ದಿನಕ್ಕೊಂದು ಮಳೆ ಯತೆ ಒಕ್ಟೊಬರ್ 13ರ ತನಕವೂ ಮುಂದುವರಿಯುವ ಲಕ್ಷಣಗಳಿವೆ. ಮಧ್ಯ ಒಂದೆರಡು ದಿನ ಕಡಿಮೆ ಇರಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ದಾವಣಗೆರೆ, ಬಳ್ಳಾರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸೂಚನೆಗಳಿವೆ. 

ಈಗಿನ ಮಳೆಯು ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾದ ಮೋಡಗಳಿಂದಾಗುತ್ತಿವೆ. ಹಿಂಗಾರು ಮಾರುತಗಳು ಮತ್ತಷ್ಟು ತಡವಾಗುವ ಸಾಧ್ಯತೆಗಳಿವೆ. 

No comments:

Post a Comment

18.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಉತ್ತಮ ಮಳೆ, ದ...