Advertise

05 October 2024

06.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಅಥವಾ ರಾತ್ರಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಒಕ್ಟೊಬರ್ 6ರಿಂದ ಮಳೆ ಜಾಸ್ತಿಯಾಗುವ ಲಕ್ಷಣಗಳಿವೆ. ಒಕ್ಟೊಬರ್ 11ರಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಮಲೆನಾಡು : ಕೊಡಗಿನ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಹಾಗೂ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಒಕ್ಟೊಬರ್ 6ರಿಂದ ಮಳೆ ಜಾಸ್ತಿಯಾಗುವ ಲಕ್ಷಣಗಳಿವೆ. 

ಒಳನಾಡು :  ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಪ್ಪಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸಹಿತ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. 

ವಾಯುಭಾರ ಕುಸಿತ : ಈಗಿನಂತೆ ಒಕ್ಟೊಬರ್ 10ರ ವೇಳೆಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮ ಕಾದು ನೋಡಬೇಕಾಗಿದೆ. ರಾಜ್ಯದಲ್ಲಿ ಕರಾವಳಿ ಸೇರಿದಂತೆ ಮಳೆ ಹೆಚ್ಚಾಗುವ ಲಕ್ಷಣಗಳಿವೆ. 

No comments:

Post a Comment

18.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಉತ್ತಮ ಮಳೆ, ದ...