ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಜಾಸ್ತಿ ಇದ್ದರೆ, ದಕ್ಷಿಣ ಕನ್ನಡದ ಸುಳ್ಯ, ಕಡಬ ಭಾಗಗಳಲ್ಲಿ ಕಡಿಮೆ ಇರಬಹುದು.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ. ಮಧ್ಯ ಒಂದೆರಡು ದಿನ ಕಡಿಮೆ ಇರಬಹುದು.
ಮಲೆನಾಡು : ಕೊಡಗು ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಗುಡುಗು ಮಳೆಯ ಮುನ್ಸೂಚನೆ ಇದೆ. ಮಧ್ಯ ಒಂದೆರಡು ದಿನ ಕಡಿಮೆ ಇರಬಹುದು.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಗುಡುಗು ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದ ದಕ್ಷಿಣ ಕರಾವಳಿ ಭಾಗದಲ್ಲಿ ಉಂಟಾದ ವಾಯುಭಾರ ಕುಸಿತವು ಒಕ್ಟೊಬರ್ 12ರ ಸುಮಾರಿಗೆ ಪಶ್ಚಿಮಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಅದು ಆ ಕಡೆ ಚಲಿಸುತ್ತಿದ್ದಂತಯೇ ರಾಜ್ಯದಲ್ಲಿ ಹಿಂಗಾರು ಆರಂಭವಾಗುವ ಸಾಧ್ಯತೆಗಳಿವೆ.
No comments:
Post a Comment