ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ (ಪಶ್ಚಿಮದ ಮೋಡದಿಂದ). ಕಡಲ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ( ಪೂರ್ವದ ಮೋಡದಿಂದ) ಸ್ವಲ್ಪ ಜಾಸ್ತಿ ಇರಬಹುದು. ಮಂಗಳೂರು ಹಾಗೂ ಉಡುಪಿ ಕಡಲ ತೀರ ಭಾಗಗಳಲ್ಲಿ ಸಹ ಸ್ವಲ್ಪ ಜಾಸ್ತಿ ಇರಬಹುದು (ಪಶ್ಚಿಮದ ಮೋಡದಿಂದ). ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ (ಪೂರ್ವದ ಮೋಡದಿಂದ).
ಈಗಿನಂತೆ ಒಕ್ಟೊಬರ್ 15 ರಿಂದ 17ರ ತನಕ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಭಾರಿ ಮಳೆಯ ಮುನ್ಸೂಚೆನೆ ಇದೆ. (ಬದಲಾಗಬಹುದು)
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಅನಿರೀಕ್ಷಿತವಾಗಿ ಭಾರಿ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಕ್ಟೊಬರ್ 15 ಹಾಗೂ 16ರಂದು ಭಾರಿ ಮಳೆಯ ಸಾಧ್ಯತೆ ಇದೆ. (ಬದಲಾಗಬಹುದು)
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ (ಅಥಣಿ ಸಹಿತ), ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. (ಪೂರ್ವದ ಮೋಡದಿಂದ).
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ( ಗುಂಡ್ಲುಪೇಟೆ ಸಹಿತ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಒಕ್ಟೊಬರ್ 12ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಒಕ್ಟೊಬರ್ 15 ಹಾಗೂ 16ರಂದು ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಭಾರಿ ಮಳೆಯ ಮುನ್ಸೂಚೆನೆ ಇದೆ. ಬದಲಾಗಬಹುದು. ಕಾದುನೋಡಬೇಕಾಗಿದೆ.
No comments:
Post a Comment