Advertise

13 October 2024

14.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗಳ ಪರಿಣಾಮ ಒಕ್ಟೊಬರ್ 14ರಿಂದ ಮಳೆ ಜಾಸ್ತಿಯಾಗುವ ಲಕ್ಷಣಗಳಿದ್ದು, ಒಕ್ಟೊಬರ್ 16,17ರಂದು ಅತಿ ಭಾರಿ ಮಳೆಯ ಮುನ್ಸೂಚೆನೆ ಇದೆ (ವಾಯುಭಾರ ಕುಸಿತ ಹಾದು ಹೋಗಲಿರುವುದರಿಂದ).

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಕ್ಟೊಬರ್ 17ರಂದು ದಕ್ಷಿಣ ಕರ್ನಾಟಕದ ಮೂಲಕ ಹಾದುಹೋಗುವ ನಿರೀಕ್ಷೆ ಇದ್ದು, ಅತಿ ಭಾರಿ ಮಳೆಯ ಮುನ್ಸೂಚೆನೆ ಇದೆ. 

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ, ರಾಯಚೂರು, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದರೆ, ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸಹಿತ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಕ್ಟೊಬರ್ 17ರಂದು ಓಮನ್ ಕರಾವಳಿಗೆ ತಲಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಒಕ್ಟೊಬರ್ 16,17 ಹಾಗೂ 18ರಂದು ಆಂದ್ರಾ ಕರಾವಳಿ ಮೂಲಕ ಪ್ರವೇಶಿಸಿ, ದಕ್ಷಿಣ ಕರ್ನಾಟಕದ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಇದರಿಂದ ಗಾಳಿಯೊಂದಿಗೆ ಅತಿ ಭಾರಿ ಮಳೆಯ ಮುನ್ಸೂಚೆನೆ ಇದೆ. (ಪಥ ಬದಲಾದರೆ ಮಳೆಯ ಪ್ರಮಾಣ ಬದಲಾಗಬಹುದು). 

No comments:

Post a Comment

20.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ...