Advertise

18 October 2024

18.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಬೆಳಿಗ್ಗೆಯಿಂದಲೇ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಒಕ್ಟೊಬರ್ 24ರಿಂದ ಹಿಂಗಾರು ದುರ್ಬಲಗೊಂಡು ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡ, ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಒಳನಾಡು ಅಥವಾ ಬಯಲುಸೀಮೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 24ರಿಂದ ಮಳೆ ಕ್ಷೀಣಿಸುವ ಲಕ್ಷಣಗಳಿವೆ. 

ಒಳನಾಡು : ಹಾವೇರಿ, ಧಾರವಾಡ, ಬೆಳಗಾವಿ (ಅಥಣಿ ಸಹಿತ), ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಬೆಳಿಗ್ಗೆಯಿಂದ ಮಳೆಯಾಗುತ್ತಿದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ) ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 22ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ.

ಅರಬ್ಬಿ ಸಮುದ್ರದಲ್ಲಿ ಕರ್ನಾಟಕ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರ ಪರಿಣಾಮ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಪಶ್ಚಿಮದ ಮೋಡದಿಂದ ಹಾಗೂ ಉತ್ತರ ಕರ್ನಾಟಕದ ಭಾಗಗಳಲ್ಲಿ ಹಿಂಗಾರು (ಪೂರ್ವದ ಮೋಡದಿಂದ) ಮಳೆಯಾಗುತ್ತಿದೆ.
ಒಕ್ಟೊಬರ್ 20 ಅಥವಾ 21ರಂದ ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಉತ್ತರಾಭಿಮುಖವಾಗಿ ಚಲಿಸುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ಹಿಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...