Advertise

20 October 2024

21.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


21.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗಿದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲೂ ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾಗಿದ್ದು,  ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಮತ್ತೆ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾಸ್ತಿ ಇರಬಹುದು. 
ಈಗಿನಂತೆ  ಒಕ್ಟೊಬರ್ 21ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಒಕ್ಟೊಬರ್ 25ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ವಿಜಯಪುರ, ಕೊಪ್ಪಳ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಕ್ಟೊಬರ್ 25ರ ತನಕ ಹಿಂಗಾರು ಮಳೆ ಮುಂದುವರಿಯುವ ಸೂಚನೆಗಳಿವೆ. 

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದೆ. ಇದು ಪ್ರಭಲಗೊಂಡು "ಡಾನಾ" ಚಂಡಮಾರುತವಾಗಿ ಒಡಿಸ್ಸಾ ಕರಾವಳಿಗೆ ಒಕ್ಟೊಬರ್ 24ರಂದು ಅಪ್ಪಳಿಸುವ ಲಕ್ಷಣಗಳಿವೆ. ಇದರೊಂದಿಗೆ ಹಿಂಗಾರು ಸಂಪೂರ್ಣ ದುರ್ಬಲಗೊಳ್ಳುವ ಸಾಧ್ಯತೆಗಳಿವೆ. 

No comments:

Post a Comment

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ...