Advertise

28 October 2024

29.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಭಾಗಗಳಲ್ಲಿ ಅರಬ್ಬಿ ಸಮುದ್ರ ಕಡೆಯಿಂದ ಗಾಳಿ ಬೀಸುತ್ತಿದ್ದು, ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉಡುಪಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ವಾತಾವರಣವು ಹೀಗೆ ಮುಂದುವರಿಯುವ ಲಕ್ಷಣಗಳಿದ್ದು, ಒಕ್ಟೊಬರ್ 31ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾಗೂ ನವೆಂಬರ್ 2ರಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹಲವೆಡೆ ಮೋಡದ ವಾತಾವರಣದ ಸಾಧ್ಯತೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 1ರಿಂದ ಮಲೆನಾಡಿನ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದ್ದು, ನವೆಂಬರ್ 1ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಿಗೆ ಅರಬ್ಬಿ ಸಮುದ್ರದ ಮೂಲಕ ಗಾಳಿ ಬೀಸುತ್ತಿದ್ದು, ಉತ್ತರ ಒಳನಾಡಿನಲ್ಲಿ ಉತ್ತರ ಭಾರತದ ಕಡೆಯಿಂದ ಗಾಳಿ ಬೀಸುತ್ತಿದೆ. ಇದರಿಂದ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಗಳಿವೆ. 

No comments:

Post a Comment

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :  ಕಾಸರಗೋಡು ಸೇರಿದಂತೆ ರಾ...