Advertise

30 November 2024

01.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಇವತ್ತಿನಿಂದ ರಾಜ್ಯದಲ್ಲಿ ಛಳಿಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. 

ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿರುವ ಪೆಂಗಾಲ್ ಚಂಡಮಾರುತವು ಡಿಸೆಂಬರ್ 1ರಂದು ಪಾಂಡಿಚೇರಿ ಮೂಲಕ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಡಿಸೆಂಬರ್ 2 ಹಾಗೂ 3 ರಂದು ತಮಿಳುನಾಡು - ಕರ್ನಾಟಕ ಗಡಿ ಭಾಗಗಳಲ್ಲಿ ಸಾಗಿ ಕೇರಳದ ಕೋಜಿಕ್ಕೊಡು ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ. 

ರಾಜ್ಯದಲ್ಲಿ ಡಿಸೆಂಬರ್ 2 ರಿಂದ ಡಿಸೆಂಬರ್ 4ರ ತನಕ ದಕ್ಷಿಣ ಒಳನಾಡು, ಕೊಡಗು, ಹಾಸನ, ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದ್ದರೆ ಉತ್ತರ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. 

ಚಂಡಮಾರುತವು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿದ ನಂತರವೂ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

29 November 2024

30.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. 
ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಚಂಡಮಾರುತದ ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ಶುಶ್ಕ ಹಾಗೂ ಶೀತ ಗಾಳಿ ಸೆಳೆಯಲ್ಪಡುತ್ತಿರುವುದರಿಂದ ಉತ್ತಮ ಛಳಿಯ ವಾತಾವರಣ ಸೃಷ್ಟಿಯಾಗಿದೆ.
ಈ ಚಂಡಮಾರುತವು ನವೆಂಬರ್ 30ರಂದು ಉತ್ತರ ತಮಿಳುನಾಡು ಕರಾವಳಿಯ ಮೂಲಕ ಭೂ ಪ್ರವೇಶಿಸುತ್ತಿದ್ದಂತೆಯೆ ರಾಜ್ಯದಲ್ಲಿ ಛಳಿಯ ವಾತಾವರಣವು ಕಡಿಮೆಯಾಗಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಡಿಸೆಂಬರ್ 2 ಅಥವಾ 3ರಂದು ಚಂಡಮಾರುತವು ಕೇರಳದ ಕಾಸರಗೋಡು ಹಾಗೂ ಕಣ್ಣೂರು ಮಧ್ಯೆ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ.
ಈ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಇರುವಷ್ಟು ಸಮಯವೂ ( ಬಂಗಾಳಕೊಲ್ಲಿ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ) ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಸುಮಾರು ಡಿಸೆಂಬರ್ ಮೊದಲ ವಾರ ಪೂರ್ತಿ ಮಳೆಯ ಸಾಧ್ಯತೆ ಇದೆ. 

07.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲ...