Advertise

09 November 2024

10.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಕಡಲ ತೀರ ಭಾಗದ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 
ಈಗಿನಂತೆ ನವೆಂಬರ್ 13ರಿಂದ 18ರ ತನಕ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ಈಗಿನಂತೆ ನವೆಂಬರ್ 13ರಿಂದ ಹಿಂಗಾರು ಚುರುಕಾಗಿ ಮಳೆಯ ಮುನ್ಸೂಚನೆ ಇದೆ. 

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ಈಗಿನಂತೆ ನವೆಂಬರ್ 13ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಾಗೂ 14ರಿಂದ ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಚುರುಕಾಗುವ ಲಕ್ಷಣಗಳಿವೆ. 

ಬಂಗಾಳಕೊಲ್ಲಿಯ ತಿರುಗುವಿಕೆಯು ನವೆಂಬರ್ 12 ಅಥವಾ 13ರಂದು ಶಿಥಿಲಗೊಳ್ಳುವ ಸಾಧ್ಯತೆಗಳಿದ್ದು, ಬಳಿಕ ಹಿಂಗಾರು ಚುರುಕಾಗುವ ಲಕ್ಷಣಗಳಿವೆ. 


No comments:

Post a Comment

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ.

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳ...