Advertise

18 November 2024

19.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ  ಸಂಜೆ, ರಾತ್ರಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ನವೆಂಬರ್ 22ರ ತನಕ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮಲೆನಾಡು : ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಆವರಿಸುವ ಮುನ್ಸೂಚನೆ ಇದೆ. 

ಒಳನಾಡು: ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ನವೆಂಬರ್ 19ರ ತನಕ ದಕ್ಷಿಣ ಒಳನಾಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. 

ಉತ್ತರ ಸುಮಾತ್ರ ಕರಾವಳಿಯಲ್ಲಿ ನವೆಂಬರ್ 21ರಂದು ಉಂಟಾಗುವ ವಾಯುಭಾರ ಕುಸಿತವು ನವೆಂಬರ್ 27 ಅಥವಾ 28ರಂದು ಉತ್ತರ ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿಗೆ ಚಂಡಮಾರುತವಾಗಿ ಅಪ್ಪಳಿಸುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ರಾಜ್ಯದಲ್ಲೂ ಮಳೆಯಾಗುವ ಲಕ್ಷಣಗಳಿವೆ. 
ನವೆಂಬರ್ 23 ಅಥವಾ 24ರಂದು ಸ್ಪಷ್ಟತೆ ಸಿಗಬಹುದು. 

No comments:

Post a Comment

25.04.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ  ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳ...