20 November 2024

21.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

 ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. 
ಕದಕ್ಷಿಣ ಕನ್ನಡ ಹಾಗೂ ಕೇರಳ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಈಗಿನಂತೆ ಬಂಗಾಳಕೊಲ್ಲಿಯ ಉತ್ತರ ಸುಮಾತ್ರ ಕರಾವಳಿಯಲ್ಲಿ ತಿರಿಗುವಿಕೆ ಆರಂಭವಾಗಿದ್ದು, ನವೆಂಬರ್ 22 ಅಥವಾ 23ರಿಂದ ಪ್ರಭಲವಾಗಿ ನವೆಂಬರ್ 24ರಂದು ದಕ್ಷಿಣ ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. 
ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ದಿನ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಭಾರಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

No comments:

Post a Comment