Advertise

21 November 2024

22.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 
ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಹಗುರ ಮೋಡಗಳು ಆವರಿಸುವ ಸಾಧ್ಯತೆಗಳಿವೆ. ಮಳೆಯ ಸಾಧ್ಯತೆಗಳಿಲ್ಲ.

ಉತ್ತರ ಸುಮಾತ್ರ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯು ಪ್ರಭಲಗೊಂಡು, ನವೆಂಬರ್ 26ರ ಸುಮಾರಿಗೆ ಚಂಡಮಾರುತವಾಗಿ ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಅಲ್ಲಿಂ ದುರ್ಬಲಗೊಂಡು ಉತ್ತರಾಭಿಮುಖವಾಗಿ ಚಲಿಸಿ ತಮಿಳುನಾಡು, ಆಂದ್ರಾ ಕರಾವಳಿಗೆ ತಲಪುವ ನಿರೀಕ್ಷೆಯಿದೆ.
ಇದರ ಪ್ರಭಾವದಿಂದ ಕರ್ನಾಟಕದಲ್ಲಿ ನವೆಂಬರ್ 27ರಿಂದ ಡಿಸೆಂಬರ್ 2ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದ್ದರೂ, ನವೆಂಬರ್ 25ರ ತನಕ ಕಾದು ನೋಡಬೇಕಾಗಿದೆ. ಆಮೇಲೆ ಸ್ಪಷ್ಟತೆ ಸಿಗಬಹುದು. 

No comments:

Post a Comment

24.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...