ಕಾಸರಗೋಡು ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ನವೆಂಬರ್ ಕೊನೆಯ ತನಕವೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಡಿಸೆಂಬರ್ ಮೊದಲ ವಾರದಲ್ಲಿ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕಾದು ನೋಡಬೇಕಾಗಿದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಇವತ್ತು ತಡರಾತ್ರಿ ಅಥವಾ ನಾಳೆ ಬೆಳಿಗ್ಗೆ ಶ್ರೀಲಂಕಾ ಕರಾವಳಿ ಸಮೀಪ ತಲಪುವ ನಿರೀಕ್ಷೆ ಇದ್ದು, ಅಲ್ಲಿಂದ ಉತ್ತರಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ.
No comments:
Post a Comment