Advertise

26 November 2024

27.11.202ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆಯ ಜೊತೆಗೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಕರಾವಳಿ ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. 

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆಯ ಜೊತೆಗೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಕೊಡಗು ಹೊರತು ಪಡಿಸಿ ಉಳಿದ ಮಲೆನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಕೊಡಗಿನ ಅಲ್ಲಲ್ಲಿ ಡಿಸೆಂಬರ್ 1ರಿಂದ 2 ಅಥವಾ 3 ದಿನಗಳ ಕಾಲ ತುಂತುರು ಮಳೆಯ ಸಾಧ್ಯತೆ ಇದೆ. (ಬದಲಾಗಬಹುದು) 

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ತಮಿಳುನಾಡು ಗಡಿಗೆ ಸಮೀಪದ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ನವೆಂಬರ್ 28ರಿಂದ ಮೋಡದ ವಾತಾವರಣ ಕಡಿಮೆಯಾಗಬಹುದು. 
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುವ ಲಕ್ಷಣಗಳಿದ್ದು, ನವೆಂಬರ್ 29 ಅಥವಾ 30ರಂದು ಬಂಗ್ಲಾ ಕರಾವಳಿಗೆ ತಲಪುವ ನಿರೀಕ್ಷೆಯಿದೆ. 
ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುತ್ತಿದಂತೆಯೇ ರಾಜ್ಯದಲ್ಲಿ ಛಳಿಯ ವಾತಾವರಣವು ಹೆಚ್ಚಾಗಬಹುದು.


No comments:

Post a Comment

24.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...