Advertise

01 December 2024

02.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 
ರಾಜ್ಯದ ದಕ್ಷಿಣ ಭಾಗದಲ್ಲಿ ಮೋಡ ಜಾಸ್ತಿ ಇರಲಿದೆ. 

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 
ಉತ್ತರ ಕನ್ನಡ ಹಗುರ ಮೋಡ ಹಾಗೂ ಒಣಹವೆ ಮುಂದುವರಿಯಲಿದೆ. 
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 2ರಿಂದ 4ನೇ ತಾರೀಕಿನ ತನಕ ಮಳೆಯಾಗುವ ಲಕ್ಷಣಗಳಿವೆ. ಡಿಸೆಂಬರ್ 2ರಂದು ಮಳೆಯ ಪ್ರಮಾಣ ಜಾಸ್ತಿ ಇರಬಹುದು. 

ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಡಿಸೆಂಬರ್ 2ರಂದು ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಮೆಯಾದರೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಡಿಸೆಂಬರ್ 4ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮೈಸೂರು ಸ್ವಲ್ಪ ಜಾಸ್ತಿ ಇರಬಹುದು. 
ಈಗಿನಂತೆ ಉತ್ತರ ಒಳನಾಡಿನಲ್ಲಿ ಡಿಸೆಂಬರ್ 2 ಹಾಗೂ ಡಿಸೆಂಬರ್ 4ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ದಕ್ಷಿಣ ಒಳನಾಡು ಭಾಗಗಳಲ್ಲಿ ಡಿಸೆಂಬರ್ 2 ಹಾಗೂ 3ರಂದು ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಪಾಂಡಿಚೇರಿ ಕರಾವಳಿಯಲ್ಲಿ ಬೀಡುಬಿಟ್ಟಿರುವ ಫೆಂಗಲ್ ಚಂಡಮಾರುತವು ದಿನಕಳೆದಂತೆ ದುರ್ಬಲಗೊಳ್ಳುತ್ತಿದ್ದು, ಡಿಸೆಂಬರ್ 2 ಹಾಗೂ 3ರಂದು ರಾಜ್ಯದ ಚಾಮರಾಜನಗರ ಮೂಲಕ ಸಾಗಿ ಕೇರಳದ ಕೋಜಿಕ್ಕೊಡು ಭಾಗದಲ್ಲಿ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಈಗಾಗಲೇ ರಾಜ್ಯದಲ್ಲಿ ಛಳಿ ಪ್ರಮಾಣವು ಕಡಿಮೆಯಾಗಿದ್ದು, ಫೆಂಗಲ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಇರುವಷ್ಟು ಸಮಯವೂ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯನ್ನು ಸೆಳೆಯುತ್ತಿರುವುದರಿಂದ ಛಳಿಯ ಪ್ರಮಾಣ ಕಡಿಮೆಯಾಗಿರುವ ಸಾಧ್ಯತೆಗಳಿವೆ. 
ಡಿಸೆಂಬರ್ 3ರ ನಂತರ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುಂದುವರಿಯುವ ಸಾಧ್ಯತೆಗಳಿವೆ. 

No comments:

Post a Comment

24.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ...