Advertise

02 December 2024

03.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ ಉತ್ತಮ ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. ಮಳೆ ನಿರಂತರ ನಾಳೆಯ ತನಕವೂ ಮುಂದುವರಿಯುವ ಲಕ್ಷಣಗಳಿವೆ. 
ಈಗಿನಂತೆ ಮಳೆಯು ಡಿಸೆಂಬರ್ 4ರ ತನಕ ಮುಂದುವರಿಯುವ ಮುನ್ಸೂಚೆನೆ ಇದ್ದು, ನಂತರ ಕಡಿಮೆಯಾಗುವ ಸೂಚನೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ಹಾಗೂ ನಂತರ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ನಿರಂತರ ಮಳೆಯು ಡಿಸೆಂಬರ್ 3ರ ಮುಂಜಾನೆ ತನಕ ಮುಂದುವರಿಯುವ ಸಾಧ್ಯತೆಗಳಿವೆ. 
ಈಗಿನಂತೆ ಡಿಸೆಂಬರ್ 5ರಿಂದ ಮಳೆ ಕಡಿಮೆಯಾಗಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ಒಳನಾಡು : ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಉತ್ತರ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಜಾಸ್ತಿ ಇರುವ ಸಾಧ್ಯತೆಗಳಿವೆ. 
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಉತ್ತರ ಒಳನಾಡಿನಲ್ಲಿ ಡಿಸೆಂಬರ್ 4ರ ತನಕ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆ ಮುಂದುವರಿಯಲಿದ್ದು, 
ದಕ್ಷಿಣ ಒಳನಾಡು ಭಾಗಗಳಲ್ಲಿ ಡಿಸೆಂಬರ್ 3ರ ತನಕ ಮಳೆಯ ಮುನ್ಸೂಚೆನೆ ಇದೆ. ನಂತರ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ. 

ಫೆಂಗಲ್ ಚಂಡಮಾರುತವು ದುರ್ಬಲಗೊಂಡಿದ್ದು, ತಿರುಗುವಿಕೆಯ ಪ್ರಮಾಣದಲ್ಲಿದೆ. ಡಿಸೆಂಬರ್ 3ರ ಮುಂಜಾನೆ ಸುಮಾರು 2.00 ಘಂಟೆಯ ಅಂದಾಜಿಗೆ ಕರ್ನಾಟಕದ ಮಂಗಳೂರು ಹಾಗೂ ಕೇರಳದ ನೀಲೇಶ್ವರ ಮಧ್ಯೆ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆಗಳಿವೆ.


No comments:

Post a Comment

19.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಉತ್ತಮ ಮಳೆಯ ಮ...