07.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಗುಡುಗು ಸಾಧ್ಯತೆಯೂ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಇನ್ನು ದಿನ ಕಳೆದಂತೆ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಡಿಸೆಂಬರ್ 9 ರಿಂದ ಸಂಪೂರ್ಣ ಕಡಿಮೆಯಾಗುವ ಲಕ್ಷಣಗಳಿವೆ.
ಈಗಿನಂತೆ ಇನ್ನು ದಿನ ಕಳೆದಂತೆ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಡಿಸೆಂಬರ್ 9 ರಿಂದ ಸಂಪೂರ್ಣ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಡಿಸೆಂಬರ್ 9ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ಆದರೆ ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ವಿಜಯಪುರ ಜಿಲ್ಲೆಯಲ್ಲಿ ಡಿಸೆಂಬರ್ 7ರ ಮುಂಜಾನೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಂದೆರಡು ಕಡೆ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 12ರ ತನಕವೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಡಿಸೆಂಬರ್ 9ರ ತನ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಅರಬ್ಬಿ ಸಮುದ್ರದ ತಿರುವಿಕೆಯು (ಫೆಂಗಲ್ ಚಂಡಮಾರುತ) ಸಂಪೂರ್ಣ ಶಿಥಿಲಗೊಳ್ಳುವ ಹಂತದಲ್ಲಿದ್ದು, ಈಗಿನ ಹಿಂಗಾರು ರೀತಿಯ ಮಳೆಯೂ ಕಡಿಮೆಯಾಗುವ ಲಕ್ಷಣಗಳಿವೆ.
ಆದರೆ ನಿಕೋಬಾರ್ ಕರಾವಳಿಲ್ಲಿ ಉಂಟಾಗಿರುವ ತಿರುವಿಕೆಯು ಶ್ರೀಲಂಕಾ ಕರಾವಳಿ ಸಮೀಪ ಸಾಗುತ್ತಿದ್ದು, ಡಿಸೆಂಬರ್ 12 ಅಥವಾ 13ರ ವೇಳೆಗೆ ತಮಿಳುನಾಡು ಕರಾವಳಿಗೆ ತಲಪುವ ಊಹನೆ ಇದೆ. ಹಾಗೇನಾದರು ಸಂಭವಿಸಿದರೆ ಡಿ. 13ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸಾಧ್ಯತೆಗಳಿವೆ.
No comments:
Post a Comment