ಕರಾವಳಿ : ಕಾಸರಗೋಡು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಡಿಸೆಂಬರ್ 10ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ ಡಿಸೆಂಬರ್ 12 ಹಾಗೂ 13ರಂದು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚೆನೆ ಇದೆ. ನಂತರ ಕಡಮೆಯಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಡಿಸೆಂಬರ್ 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ 12ರಂದು ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚೆನೆ ಇದೆ. 13ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಹಾಗೂ ವಿಜಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಆವರಿಸುವ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ, ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಡಿಸೆಂಬರ್ 12 ಹಾಗೂ 13ರಂದು ವಾಯುಭಾರ ಕುಸಿತದ ಮಳೆಯ ಮುನ್ಸೂಚೆನೆ ಇದೆ. ನಂತರ ಒಣಹವೆ ಆವರಿಸುವ ಸಾಧ್ಯತೆಗಳಿವೆ.
ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯ ಶ್ರೀಲಂಕಾ ಬಳಿ ತಲುಪಿರುವ ವಾಯುಭಾರ ಕುಸಿತವು ಡಿಸೆಂಬರ್ 12ರಂದು ಉತ್ತರ ಶ್ರೀಲಂಕಾ ಸಮೀಪದ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದ್ದು. ಡಿಸೆಂಬರ್ 14 ರಂದು ದಕ್ಷಿಣ ಕೇರಳ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಬಂಗಾಳಕೊಲ್ಲಿಯಲ್ಲಿ ಡಿಸೆಂಬರ್ 17 ಹಾಗೂ 21ರಂದು ಇನ್ನೆರಡು ವಾಯುಭಾರ ಕುಸಿತಗಳು ಉಂಟಾಗುವ ಲಕ್ಷಣಗಳಿವೆ.
No comments:
Post a Comment