Advertise

13 December 2024

14.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : 

ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ದಿನವಿಡೀ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಕನ್ನಡದ ಮಂಗಳೂರು ಸುತ್ತಮುತ್ತ ಭಾಗಗಳಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಹಾಗೂ ಉಡುಪಿ ಜಿಲ್ಲೆಯಲ್ಲಿ ದಿನದ ಬಹುಪಾಲು ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಡಿಸೆಂಬರ್ 14ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲಿನ ವಾತಾವರಣದ ಸಾಧ್ಯತೆ ಇದ್ದು, 17ರಿಂದ ಮತ್ತೆ ಮೋಡದ ವಾತಾವರಣದ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ಡಿಸೆಂಬರ್ 14ರಿಂದ ಬಿಸಿಲಿನ ವಾತಾವರಣದ ಸಾಧ್ಯತೆ ಇದ್ದು, 17ರಿಂದ ಮೋಡ ಹಾಗೂ ಸಣ್ಣ ಪ್ರಮಾಣದ ಮಳೆಯ ಲಕ್ಷಣಗಳಿವೆ. 

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ಡಿಸೆಂಬರ್ 14ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, 17ರಿಂದ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸೂಚನೆಗಳಿವೆ. 

ಶ್ರೀಲಂಕಾ ಪಶ್ಚಿಮ ಕರಾವಳಿಗೆ ತಲುಪಿರುವ ವಾಯುಭಾರ ಕುಸಿತವು ಮತ್ತಷ್ಟು ದಕ್ಷಿಣಕ್ಕೆ ಚಲಿಸಿದ್ದು, ನಾಳೆ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದೇ ಸಂದರ್ಭದಲ್ಲಿ ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಡಿಸೆಂಬರ್ 17ರ ಸುಮಾರಿಗೆ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಒತ್ತಡದ ಪ್ರಮಾಣವು 1005hPa ಸನೀಹ ಇರುವುದರಿಂದ ಚಂಡಮಾರುತವಾಗುವ ಸಾಧ್ಯತೆಗಳು ಕಡಿಮೆ ಇರಬಹುದು.
ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. 

No comments:

Post a Comment

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :  ಕಾಸರಗೋಡು ಸೇರಿದಂತೆ ರಾ...