Advertise

17 December 2024

18.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಉತ್ತರ ಭಾರತದ ಕಡೆಯಿಂದ ನೇರವಾಗಿ ಗಾಳಿ ಬೀಸುತ್ತಿರುವುದರಿಂದ ಛಳಿಯ ಪ್ರಮಾಣ ಹೆಚ್ಚಾಗುತ್ತಿದೆ. 
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತಮಿಳುನಾಡು, ಆಂದ್ರಾ, ಒಡಿಶಾ ಕರಾವಳಿ ಮೂಲಕ ಡಿಸೆಂಬರ್ 21ರಂದು ಪಶ್ಚಿಮ ಬಂಗಾಳ ಕರಾವಳಿ ತಲುಪಲಿದೆ.
ಆದರೆ ಸಮುದಲ್ಲೇ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ಇದರ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಗೋಚರಿತ್ತಿಲ್ಲ. ಮಳೆಯ ಆತಂಕವೂ ದೂರವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಬೆಳೆಕಟಾವು ಕಾರ್ಯವನ್ನು ನಿರಾತಂಕವಾಗಿ ನಡೆಸಬಹುದು
ಆದರೆ ಡಿಸೆಂಬರ್ 18ರಿಂದ 3 ದಿವಸಗಳ ಕಾಲ ಬೆಂಗಳೂರು ದಕ್ಷಿಣ ಸಹಿತ ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಈ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುತ್ತಿದಂತೆಯೇ, ಅರಬ್ಬಿ ಸಮುದ್ರದ ಕಡೆಯಿಂದ ಸ್ವಲ್ಪ ಮಟ್ಟಿಗೆ ಗಾಳಿ ಸೆಳೆಯಲ್ಪಡುವುದರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 20ರಿಂದ ಛಳಿಯ ಪ್ರಮಾಣವು ಸ್ವಲ್ಪ ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...