ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 24ರ ತನಕವೂ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, 25ರಿಂದ 3 ದಿವಸಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ನಂತರ ಮತ್ತೆ ನಿಧಾನವಾಗಿ ಛಳಿ ಹೆಚ್ಚಾಗುವ ನಿರೀಕ್ಷೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಡಿಸೆಂಬರ್ 22ರಿಂದ ಮೋಡದ ಪ್ರಮಾಣ ಸ್ವಲ್ಪ ಜಾಸ್ತಿಯಾದರೂ ಮಳೆಯ ಸಾಧ್ಯತೆಯು ಡಿಸೆಂಬರ್ 24ರಿಂದ ಗೋಚರಿಸುತ್ತಿದೆ. 28ರಿಂದ ಛಳಿ ಹಾಗೂ ಒಣ ಹವೆ ಆವರಿಸುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ಒಂದೆರಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ಡಿಸೆಂಬರ್ 22ರಿಂದ ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಲ್ಲಿ ಸಾಮಾನ್ಯ ಮಳೆ ಪ್ರಾರಂಭವಾಗಿ, ಡಿಸೆಂಬರ್ 27ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಡಿಸೆಂಬರ್ 28ರಿಂದ ಒಣಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಚಲನೆಯು ನಿಧಾನವಾಗಿದ್ದು, ಭೂ ಪ್ರವೇಶಿಸುವ ಸಾಧ್ಯತೆಗಳು ಕಡಿಮೆಯಾಗುತ್ತಿದೆ. ಇದರ ಪರಿಣಾಮದಿಂದ ಡಿಸೆಂಬರ್ 22ರಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಗಾಳಿಯು ಭೂಪ್ರವೇಶಿಸಿ ಜೊತೆಯಾಗಿ ಉತ್ತರಕ್ಕೆ ಚಲಿಸುವ ಲಕ್ಷಣಗಳಿರುವುದರಿಂದ ಛಳಿ ಕಡಿಮೆಯಾಗಿ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಟಿಯಾಗುವ ನಿರೀಕ್ಷೆ ಇದೆ.
ಈ ವಾಯುಭಾರ ಕುಸಿತವು ಡಿಸೆಂಬರ್ 26ರಂದು ಶಿಥಿಲಗೊಳ್ಳುವ ಸಾಧ್ಯತೆಗಳಿದ್ದು, ನಂತರ ಮಳೆಯ ವಾತಾವರಣ ಬದಲಾಗಿ ಛಳಿಯ ಪ್ರಮಾಣ ನಿಧಾನವಾಗಿ ಹೆಚ್ಚಾಗುವ ನಿರೀಕ್ಷೆ ಇದೆ.
No comments:
Post a Comment