24.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿ ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಈ ವಾತಾವರಣವು ಡಿಸೆಂಬರ್ 27ರ ತನಕ ಮುಂದುವರಿದು 28ರಿಂದ ಬಿಸಿಲಿನ ಅವಧಿ ಹೆಚ್ಚಿರಬಹುದು.
ಮಲೆನಾಡು : ಮಲೆನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಡಿಸೆಂಬರ್ 27ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದ್ದು, 28ರಿಂದ ಒಣಹವೆ ಆವರಿಸುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 26 ಹಾಗೂ 27ರಂದು ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿದ್ದು, 28ರಿಂದ ಒಣಹವೆ ಆವರಿಸುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಡಿಸೆಂಬರ್ 26ರಂದು ತಮಿಳುನಾಡು ಕರಾವಳಿಯ ಬಳಿ ಶಿಥಿಲಗೊಳ್ಳುತ್ತಿದ್ದಂತೆಯೇ ಹಿಂಗಾರು ರೀತಿಯ ಗಾಳಿಯ ಚಲನೆಯಿಂದ ರಾಜ್ಯದಲ್ಲಿ ಡಿಸೆಂಬರ್ 26ರಿಂದ 2 ದಿವಸಗಳ ಕಾಲ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಛಳಿಯ ಪ್ರಮಾಣವು ಹೆಚ್ಚಾಗುವ ಸಾಧ್ಯತೆಗಳಿದ್ದು ಒಣಹವೆ ಆವರಿಸುವ ಲಕ್ಷಣಗಳಿವೆ.
2025ರ ಜನವರಿಯಲ್ಲಿ ಮಳೆಯ ಲಕ್ಷಣಗಳಿಲ್ಲ.
No comments:
Post a Comment