26.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಮುನ್ಸೂಚೆನೆ ಇದೆ. ಮಂಗಳೂರಿನ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಡಿಸೆಂಬರ್ಮೋ 28ರ ತನಕವೂ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಡಿಸೆಂಬರ್ 27ರಂದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 26ರಂದು ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿದ್ದರೆ, 27ರಂದು ಕರಾವಳಿ ಜಿಲ್ಲೆಗಳಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಒಳನಾಡು : ರಾಜ್ಯದ ಉತ್ತರ ಹಾಗೂ ಒಳನಾಡು ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಉತ್ತರ ಕರ್ನಾಟಕ ಹಾಗೂ ತೆಲಂಗಾಣ ಗಡಿ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ ಹಾಗೂ ಆಂದ್ರಾ ಗಡಿಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 26 ಹಾಗೂ 27ರಂದು ಉತ್ತರ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದೆ.
ಡಿಸೆಂಬರ್ 28ರಿಂದ ಮೋಡ ಹಾಗೂ ತುಂತುರು ಮಳೆಯ ಪ್ರಮಾಣ ಕಡಿಮೆಯಾಗಿ ಡಿಸೆಂಬರ್ 29 ಅಥವಾ 30ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
No comments:
Post a Comment