ಕರ್ನಾಟಕ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಡಿಸೆಂಬರ್ 28ರಂದು ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, 29ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಸಂಜೆ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ ಜಿಲ್ಲೆಯಲ್ಲಿ ಮೋಡ ಹಾಗೂ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗ ಡಿಸೆಂಬರ್ 28ರಂದು ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, 29ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸುವ ಸೂಚನೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಬೆಳಗಾವಿ, ಧಾರವಾಡ, ಹಾವೇರಿ ಭಾಗಗಳಲ್ಲಿ ಸಂಜೆ ಹಾಗೂ ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಬೆಳಿಗ್ಗೆ, ಮಧ್ಯಾಹ್ನ ನಂತರ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ ಈಗಾಗಲೇ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದು, ಕೋಲಾರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲೂ ಬೆಳಿಗ್ಗೆ, ಮಧ್ಯಾಹ್ನ ನಂತರ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಡಿಸೆಂಬರ್ 28ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ರೀತಿಯ ಮಾರುತಗಳು ಬರುತ್ತಿರುವುದರಿಂದ ಈಗಿನ ಈ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಠಿಯಾಗಿದೆ. ಡಿಸೆಂಬರ್ 30ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿದ್ದು, ಜನವರಿಯಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
No comments:
Post a Comment