ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಮಧ್ಯಾಹ್ನ ನಂತರ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಡಿಸೆಂಬರ್ 31ರಿಂದ ಮೋಡದ ವಾತಾವರಣ ಕಡಿಮೆಯಾಗಿ ಮುಂದಿನ 10 ದಿನಗಳವರೆಗೂ ಸಾಮಾನ್ಯ ಛಳಿಯೊಂದಿಗೆ ಒಣ ಹವೆ ಮುಂದುವರಿಯಲಿದೆ.
ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನದ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಡಿಸೆಂಬರ್ 31ರಿಂದ ಒಣ ಹವೆ ಮುಂದುವರಿಯಲಿದೆ.
ಒಳನಾಡು : ಉತ್ತರ ಒಳನಾಡಿನಲ್ಲಿ ಛಳಿಯೊಂದಿಗೆ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 31ರಿಂದ ಒಣ ಹವೆ ಮುಂದುವರಿಯಲಿದೆ.
ಉತ್ತರ ಭಾರತ ಕಡೆಯಿಂದ ದಕ್ಷಿಣದ ಕಡೆಗೆ ಛಳಿ ಗಾಳಿ ಬೀಸುತ್ತಿದ್ದರೂ, ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ರೀತಿಯ ಗಾಳಿಯ ಬೀಸುತ್ತಿರುವ ಕಾರಣದಿಂದ ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಛಳಿ ಕಡಿಮೆಯಾಗಿ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಉಂಟಾಗಿದೆ.
ಡಿಸೆಂಬರ್ 31ರಿಂದ ಮೋಡದ ವಾತಾವರಣ ಕಡಿಮೆಯಾದರೂ, ದಕ್ಷಿಣ ಕರ್ನಾಟಕದಲ್ಲಿ ಮುಂದಿನ ಮೂರು, ನಾಲ್ಕು ದಿನಗಳ ಕಾಲ ಸಾಮಾನ್ಯ ಛಳಿ ಮುಂದುವರಿಯುವ ಲಕ್ಷಣಗಳಿವೆ.
No comments:
Post a Comment