Advertise

08 January 2025

09.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 

ದಕ್ಷಿಣ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಶ್ರೀಲಂಕಾ ಕರಾವಳಿಗೆ ಜನವರಿ 9ರಂದು ತಲಪುವ ನಿರೀಕ್ಷೆಯಿದೆ. 
ಇದರ ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ದಕ್ಷಿಣದ ಕಡೆಗೆ ಈಗ ಬೀಸುತ್ತಿರುವ ಶೀತ ಗಾಳಿಯು ಕಡಿಮೆಯಾಗಿ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಬೀಸಲು ಆರಂಭವಾಗುವ ಸಾಧ್ಯತೆಗಳಿವೆ. 
ಜನವರಿ 9ರಿಂದ ರಾಜ್ಯದಲ್ಲಿ ಛಳಿಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣ ಉಂಟಾಗುವ ಮುನ್ಸೂಚನೆ ಇದೆ. 

ಈಗಿನಂತೆ ಜನವರಿ 12ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 
ಇದರೊಂದಿಗೆ ಈ ಸಾಲಿನ ಛಳಿಗಾಲವು ಅಂತ್ಯವಾಗುವ ಸಾಧ್ಯತೆಯೂ ಇದೆ. 


No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...