Advertise

13 January 2025

14.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


14.01.202 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ತಡ ರಾತ್ರಿ ಸುಳ್ಯ, ಕಾಸರಗೋಡು, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಜನವರಿ 14ರಂದು ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ನಂತರ ತಾಪಮಾನ ಸ್ವಲ್ಪ ಮಟ್ಟಿಗೆ ಏರಿಕೆಯಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ ರಾತ್ರಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಆಗುಂಬೆ, ಶಿೃಂಗೇರಿ, ಕುದುರೆಮುಖ ಸ ಭಾಗಗಳಲ್ಲಿ ಅಲ್ಲಲ್ಲಿ ರಾತ್ರಿ ವೇಳೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜನವರಿ 14ರಂದು ಸಹ ಮಲೆನಾಡಿನ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಮಳೆ ಕಡಿಮೆಯಾದರೂ ಛಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಕಾಣಿಸುತ್ತಿಲ್ಲ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ( ಚಿಕ್ಕಬಳ್ಳಾಪುರ ಜಿಲ್ಲೆಯ ಅಲ್ಲಲ್ಲಿ ಮುಂಜಾನೆಯೇ ತುಂತುರು ಮಳೆಯಾಗಿದೆ). ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಜನವರಿ 14ರಿಂದ ಮಳೆ ಕಡಿಮೆಯಾಗಿ ಸ್ವಲ್ಪ ಮಟ್ಟಿಗೆ ತಾಪಮಾನ ಏರಿಕೆಯಾಗುವ ಲಕ್ಷಣಗಳಿವೆ. 

ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಇರಲಾರದು. 

No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...