15.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಮಧ್ಯಾಹ್ನ ನಂತರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಅಲ್ಲಲ್ಲಿ ಮೋಡ ಹಾಗೂ ಸಂಜೆ ಕಾರ್ಕಳ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಜನವರಿ 15ರಿಂದ 2 ದಿವಸಗಳ ಕಾಲ ಮೋಡದ ವಾತಾವರಣ ಇರಲಿದ್ದು, ನಂತರ ಬಿಸಿಲು ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮಧ್ಯಾಹ್ನ ನಂತರ ಮೋಡದ ವಾತಾವರಣ ಇರಲಿದ್ದು, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜನವರಿ 15ರಂದು ಕೊಡಗು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿದ್ದು, ಉಳಿದ ಜಿಲ್ಲೆಗಳಲ್ಲಿ ಮೋಡ ಮಾತ್ರ ಇರಬಹುದು. ಜನವರಿ 17ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಈಗಿನಂತೆ ಜನವರಿ 16ರ ತನಕ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ನಂತರ ಒಣಹವೆ ಆವರಿಸುವ ಲಕ್ಷಣಗಳಿವೆ.
ಜನವರಿ 15ರ ನಂತರ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18ರಂದು ದಕ್ಷಿಣ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮತ್ತೆ ಮೋಡ, ಮಳೆಯ ಸಾಧ್ಯತೆಗಳಿವೆ.
No comments:
Post a Comment