Advertise

15 January 2025

16.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಸುಳ್ಯ ಹಾಗೂ ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಂಜೆ, ರಾತ್ರಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಜನವರಿ 16ರ ತನಕ ಮೋಡದ ವಾತಾವರಣ ಇರಲಿದ್ದು, 17ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು ಒಂದೆರಡು ಕಡೆ, ಹಾಸನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜನವರಿ 16ರ ತನಕ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, 17ರಿಂದ ಒಣ ಹವೆ ಆವರಿಸುವ ಲಕ್ಷಣಗಳಿವೆ. 

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಒಂದೆರಡು ಕಡೆ ಸಣ್ಣ ಪ್ರಮಾಣದ ಹನಿ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಜನವರಿ 17ರ ತನಕ ಅಲ್ಲಲ್ಲಿ ಮೋಡದ ವಾತಾವರಣದ ಲಕ್ಷಣಗಳಿದ್ದು, 18ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

ಜನವರಿ 16ರ ಸುಮಾರಿಗೆ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18ರಂದು ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಆದರೆ ರಾಜ್ಯದಲ್ಲಿ ಇದರ ಪ್ರಭಾವದಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. 

No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...